ಬಾಂಗ್ಲಾದ ಹಿಂದೂಗಳ ವಿರುದ್ಧ ಕ್ರೌರ್ಯ | ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು.

ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ ಬಾಂಗ್ಲಾದ ಹಿಂದೂಗಳ ಹಿತರಕ್ಷಣೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪತ್ರಬರೆಯುವ ನಿರ್ಣಯ ಕೈಗೊಳ್ಳಲಾಯಿತು. ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಉಪನ್ಯಾಸಕ ಆದರ್ಶ ಗೋಖಲೆ, ಬಾಂಗ್ಲಾದೇಶದಲ್ಲಿ ಆಗುತ್ತಿರುವ ಅನ್ಯಾಯ ಮುಂದೊಂದು ದಿನ ನಮ್ಮ ಭಾರತದಲ್ಲಿ ಆಗದಂತೆ ಜಾಗೃತರಾಗಿರಬೇಕು. ಪ್ರಪಂಚದಾದ್ಯಂತ ಇರುವ ಯಾವೊಬ್ಬ ಹಿಂದುವಿನ ಕೂದಲೂ ಕೊಂಕದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ.  ಇದಕ್ಕಾಗಿ ಎಲ್ಲರೂ ಒಂದಾಗಬೇಕು ಎಂದರು. ವಿದ್ಯಾರ್ಥಿನಿ ಪೂರ್ವಿ ಸ್ವಾಗತಿಸಿದರು. ವಿದ್ಯಾರ್ಥಿ ವಿಕಾಸ್ ಕಾರ್ಯಕ್ರಮ ನಿರೂಪಿಸಿದರು.   































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top