ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವಕ್ಕೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು.

ಮಂಗಳವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆದು ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ಮಹಾಪೂಜೆ, ಪಲ್ಲಕ್ಕಿ ಉತ್ಸವ, ರಥೋತ್ಸವ ಸೇವೆ ನಡೆಯಿತು.
ಬುಧವಾರ ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, ಫಲ ಪಂಚಾಮೃತಾಭಿಷೇಕ, ಶ್ರೀ ಗುರುಗಳ ಆರಾಧನೆ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.