ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍.

ಪುತ್ತೂರು: ಮಂಗಳವಾರ ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಹೇಳಿಕೆಯಂತೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‍ ಎನ್‍. ಹೇಳಿದ್ದಾರೆ.

ಬುಧವಾರ ಪುತ್ತೂರು ನಗರ ಠಾಣೆಗೆ ಭೇಟಿ ನೀಡಿದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಪ್ರಕರಣದ ಕುರಿತು ವಿದ್ಯಾರ್ಥಿನಿಯು ನೀಡಿದ ಹೇಳಿಕೆ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ಆರಂಭಿಸಿದ್ದೇವೆ, ತನಿಖೆ ನಡೆಯುತ್ತಿದೆ,. ತನಿಖೆಯ ವೇಳೆ ಹೆಚ್ಚಿನ ವಿಚಾರಗಳನ್ನು ಪ್ರಸ್ತಾಪ ಮಾಡಲು ಸಾಧ್ಯವಾಗುವುದಿಲ್ಲ. ವೈಜ್ಞಾನಿಕವಾಗಿ, ಕಾನೂನಾತ್ಮಕವಾಗಿ ಹೇಗೆ ತನಿಖೆ ಮಾಡಬೇಕೋ ಹಾಗೆ ಪಾರದರ್ಶಕ ತನಿಖೆಯನ್ನು ಮಾಡುತ್ತೇವೆ. ಸಂಪೂರ್ಣ ತನಿಖೆಯ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ,



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top