ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನದ ಸ್ಮರಣಾರ್ಥವಾಗಿ ಸದ್ಭಾವನಾ ದಿನವನ್ನು ಆಚರಿಸಲಾಯಿತು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಡಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ ಸದ್ಭಾವನಾ ದಿನದ ಮಹತ್ವವನ್ನು ವಿವರಿಸಿ, ಸದ್ಭಾವನಾ ದಿನ ಅಂದರೆ ಸೌಹಾರ್ದತೆ ಮತ್ತು ಸಮರಸತೆಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.
ಪ್ರಾಚಾರ್ಯರಾದ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋರವರ ನೇತೃತ್ವದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂದರ್ಭದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು.
ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಮಿಸೆಸ್ ಸ್ಪರ್ಲ್ ಫಿಯೋನಾ ಪಿರೇರಾ ವಂದಿಸಿದರು. ಕ್ರೀಡಾ ನಿರ್ದೇಶಕ ಎಲ್ಯಾಸ್ ಪಿಂಟೋ ಮತ್ತು ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪುಷ್ಪ ಎನ್. ಉಪಸ್ಥಿತರಿದ್ದರು.