ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಮಾಡಿರುವ ಟೀಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಎಂದು ಹೇಳುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಕೆಯಾ? ಶಶಿಕಲಾ ಜೊಲ್ಲೆ ಕೇಸ್ ಇದೆ, ನಿರಾಣಿ ಕೇಸ್ ಇದೆ. ಕುಮಾರಸ್ವಾಮಿ ಕೇಸ್ ಇದೆ. ಜನಾರ್ದನ ರೆಡ್ಡಿ ಮೇಲೆ ಕೇಸ್ ಇದೆ. ಇವುಗಳಿಗೆ ಪರ್ಮಿಷನ್ ಕೊಟ್ಟಿಲ್ಲ. ಇದನ್ನು ಹೇಳಿದ್ರೆ ತಪ್ಪಾ ಎಂದು ಪ್ರಶ್ನಿಸಿದ್ದಾರೆ.
ರಾಜ್ಯಪಾಲರದ್ದು ಸಾಂವಿಧಾನಿಕ ಹುದ್ದೆ. ಅದರ ಬಗ್ಗೆ ಗೌರವ ಇರಬೇಕು. ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಪ್ರತಿನಿಧಿ ಆಗಿ ಕೆಲಸ ಮಾಡೋದು ಬೇಡ ಎಂದು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಆಡಿದ ಮಾತನ್ನು ಸಮರ್ಥಿಸಿಕೊಂಡರು.