ತಿರುವನಂತಪುರ : ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರಂನಲ್ಲಿ ವಿಮಾನವನ್ನು ಕೆಳಗಿಳಿಸಲಾಯಿತು.
ಬಾಂಬ್ ಬೆದರಿಕೆ ಬಂದ ನಂತರ ತಿರುವನಣತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ವಿಮಾನವು ಬೆಳಗ್ಗೆ 8 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು.
ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಸ್ಥಳಾಂತರಿಸಲಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಏರ್ ಇಂಡಿಯಾ ವಿಮಾನ 657 ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಪ್ರತ್ಯೇಕ ಬೇಯಲ್ಲಿ ನಿಲ್ಲಿಸಲಾಗಿದೆ.
ವಿಮಾನಕ್ಕೆ ಬಾಂಬ್ ಬೆದರಿಕೆ : ತಿರುವನಂತಪುರ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ
