ಐವನ್ ಡಿ’ಸೋಜಾ ಮನೆಗೆ ದುಷ್ಕರ್ಮಿಗಳಿಂದ ಕಲ್ಲೆಸೆತ !

ಮಂಗಳೂರು:  ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆಗೆ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬರಲಿದೆ ಎಂದು ಹೇಳಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top