ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಇದರ ಆಶ್ರಯದಲ್ಲಿ 1843ನೇ ಮದ್ಯವರ್ಜನ ಶಿಬಿರಕ್ಕೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಪುಣ್ಚಪ್ಪಾಡಿ ನೇರೋಳಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ಗುರುವಾರ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕಡಬ ತಾಲೂಕು ಶ್ರೀ ಗೌರಿ ಗಣೇಶ ಸೇವಾ ಟ್ರಸ್ಟ್ ವಿನಾಯಕನಗರ, ಪುಣ್ಚಪ್ಪಾಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಸವಣೂರು ಗ್ರಾಮ ಪಂಚಾಯತ್, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಲಾಯಿತು.
ಎಂಟು ದಿನಗಳ ಕಾಲ ನಡೆಯುವ ಶಿಬಿರವನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್., ವಿಜಯ ಬ್ಯಾಂಕ್ ನಿವೃತ್ತ ರೀಜನಲ್ ಮ್ಯಾನೇಜರ್ ಎ.ಕೃಷ್ಣ ರೈ ಪುಣ್ಯಪ್ಪಾಡಿ ತಳಮನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್, ಪುತ್ತೂರು ರೋಟರಿ ಕ್ಲಬ್ ನ. ಮಾಜಿ ಅಧ್ಯಕ್ಷ ಪಿ.ಡಿ.ಕೃಷ್ಣ ಕುಮಾರ್ ರೈ ದೇವಸ್ಯ, ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಯೋಜನಾಧಿಕಾರಿ ಮೇದಪ್ಪ ಗೌಡ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ಚೇತನ್ ಕೊಡಿಬೈಲು, ರಾಮಚಂದ್ರ ಇಡ್ಯಡ್ಕ, ವಿಜಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.