ಆ.31 : ವಿಎಚ್‍ ಪಿ ವತಿಯಿಂದ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ | ಆ.24 ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ

ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಹೇಳಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿ, ವಿಶ್ವ ಹಿಂದೂ ಪರಿಷದ್ ಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರಂಭಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ ಪುತ್ತೂರಿನಲ್ಲಿ 14ನೇ ವರ್ಷದ ಸಂಭ್ರಮದಲ್ಲಿದೆ. ಈ ಸಂದರ್ಭ ಮೊಸರು ಕುಡಿಕೆ, ಶೋಭಾಯಾತ್ರೆ ಉತ್ಸವ, ಮುಕ್ತ ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ, ಪುತ್ತೂರು ಮುದ್ದುಕೃಷ್ಣ, ಉದ್ದಕಂಬ, ವೀರ ಹಿಂದು ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಸಮಿತಿ ಸಂಚಾಲಕ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ಆ. 24ರಂದು ಬೆಳಿಗ್ಗೆ ಗಂಟೆ 10 ರಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಹಾಕಿರುವ ಸಭಾ ಮಂಟಪದಲ್ಲಿ ದಿ| ಟಿ.ರಾಧಾಕೃಷ್ಣ ಭಟ್ ಇವರ ಸ್ಮರಣಾರ್ಥ ಮೂರು ಮಾದರಿಯ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಹೋಟೆಲ್ ಅಶ್ವಿನಿ ಮಾಲಕ ಅಶ್ವಿನ್ ರೈ ಕಬಡ್ಡಿ ಅಂಕಣದ ಉದ್ಘಾಟನೆ ಮಾಡಲಿದ್ದಾರೆ. ನಂತರ 10 ಗಂಟೆಗೆ ಹೈಸ್ಕೂಲ್ ವಿಭಾಗದ ಹುಡುಗರ ಅಹ್ವಾನಿತ 6 ತಂಡಗಳ ಕಬಡ್ಡಿ ಪಂದ್ಯಾಟ, ಮಧ್ಯಾಹ್ನ 1 ರಿಂದ ವಿಶೇಷವಾಗಿ ಕಾರ್ಯಕರ್ತರ 7 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ನಡೆಯಲಿದೆ. ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಜೇಂದ್ರ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ್ ಪುನೀತ್ ಅತ್ತಾವರ,, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ್ ಭರತ್ ಕುಮೇಲು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ನಿತಿನ್ ಕುಮಾರ್ ಮಂಗಳ, ನ್ಯಾಯವಾದಿ ವಿರೂಪಾಕ್ಷ ಭಟ್ ಮಚ್ಚಿಮಲೆ, ಯುವ ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಉದ್ಯಮಿಗಳಾದ ಅರುಣ್ ಕುಮಾರ್ ರೈ ಆನಾಜಿ, ಯಶ್ ಕುಮಾರ್ ಮಕಾಡಿಯ, ಧರೇಶ್ ಹೊಳ್ಳ, ಶವಿನ್ ಪೂಜಾರಿ ಪಾಳ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.































 
 

ರಾತ್ರಿ 8 ಗಂಟೆಯಿಂದ ಪುರುಷರ ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿರುವುದು.

ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಮಾತನಾಡಿ, ಆ.31ರಂದು ಮದ್ಯಾಹ್ನ 02-30ರಿಂದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹನ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ. ಧ್ವಜ ಹಸ್ತಾಂತರ ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಸಾರ ಪ್ರಮುಖ್ ಪ್ರದೀಪ್‌ ಸರಿಪಲ್ಲ ನಡೆಸಲಿದ್ದಾರೆ ಎಂದರು.

ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಪ್ರಾರಂಭವಾಗುವ ಶೋಭಾಯಾತ್ರೆಯಲ್ಲಿ ಶ್ರೀ ಕೃಷ್ಣನ ಸುಂದರ ರಥದೊಂದಿಗೆ ಕೊಂಬು ಕಹಳೆಯೊಂದಿಗೆ ಶೋಭಾಯಾತ್ರೆಯಲ್ಲಿ ವಿಶೇಷ ಆಕರ್ಷಣೆ ಕರ್ನಾಟಕ ರಾಜ್ಯ ಮಟ್ಟದ ತಾಲೀಮು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ವೀರಾಂಜನೇಯ ವ್ಯಾಯಾಮ ಶಾಲೆ ಚಂದಳಿಕೆ ವಿಟ್ಲ ಇವರಿಂದ ಆಕರ್ಷಕ ಮೈನವಿರೇಳಿಸುವ ತಾಲೀಮು ಪ್ರದರ್ಶನ,ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಪ್ರಸಿದ್ದ ಕುಣಿತ ಭಜನಾ ತಂಡಗಳಿಂದ ಕುಣಿತ ಭಜನೆ, ಕೀಲುಕುದುರೆ, ಗೊಂಬೆ, ನಾಸಿಕ್ ಬ್ಯಾಂಡ್ ಹಾಗೂ ವಿವಿಧ ಕಲಾತಂಡಗಳು ಭಾಗವಹಿಸಲಿದೆ ಎಂದು ತಿಳಿಸಿದರು.

ಸಂಜೆ 6 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಪ್ರಸಾದ್‌ ಮುಳಿಯ ವಹಿಸಲಿದ್ದಾರೆ. ವಿಹಿಂಪ ಮಂಗಳೂರು ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.. ಮುಖ್ಯ ಅತಿಥಿಗಳಾಗಿ ಡಾ| ಗೋಪಿನಾಥ್ ಪೈ, ಭಾಗವಹಿಸಲಿದ್ದಾರೆ ಎಂದರು.

ಸಮಿತಿ ಉಪಾಧ್ಯಕ್ಷೆ ವಿ. ಪ್ರಭಾವತಿ ಮಾತನಾಡಿ, ಆ. 25ರಂದು ಆದಿತ್ಯವಾರ ಬೆಳಿಗ್ಗೆ  10 ರಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಹಾಕಿರುವ ಸಭಾಮಂಟಪದಲ್ಲಿ ದಿ. ನಿತಿನ್ ಕುಮಾರ್ ನಿಡ್ನಳ್ಳಿ ಇವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಡಾ|ಸುಧಾ ಎಸ್ ರಾವ್, ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಾ. ಅನಿಲ ದೀಪಕ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಪುತ್ತೂರು ಅಧ್ಯಕ್ಷ ದಾಮೋದರ ಪಾಟಾಳಿ, ಸಮಿತಿ ಕಾರ್ಯದರ್ಶಿ ಜಗದೀಶ್ ನೀರ್ಪಾಜೆ, ಸಹಕಾರ್ಯದರ್ಶಿ ಶರಾವತಿ ರವಿನಾರಾಯಣ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top