ಬೆಂಗಳೂರು : ಕಾರಿಗೆ ಬೈಕ್ ಉಜ್ಜಿಕೊಂಡು ಹೋಯಿತು ಎಂಬ ಸಿಟ್ಟಿನಲ್ಲಿ ಬೈಕ್ ಚಾಲಕನನ್ನು ಚೇಸ್ ಮಾಡಿಕೊಂಡು ಹೋಗಿ ಅಪಘಾತವೆಸಗಿ ಸಾಯಿಸಿದ ಆಘಾತಕಾರಿ ಘಟನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಂಭವಿಸಿದೆ.
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಡೆಲಿವರಿ ಬಾಯ್ ಮಹೇಶ್ ಎಂಬಾತ ಮೃತಪಟ್ಟ ಯುವಕ. ಮಹೇಶ್ ಬುಧವಾರ ರಾತ್ರಿ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಬೈಕ್ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್ ಮಾಡಿದರೂ ಸೈಡ್ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್ ಸ್ವಲ್ಪ ಟಚ್ ಆಗಿದೆ. ಇದೇ ಸಿಟ್ಟಿಲ್ಲಿ ಕಾರು ಚಾಲಕ ಅರವಿಂದ್, ಬೈಕನ್ನು ಚೇಸ್ ಮಾಡಿಕೊಂಡು ಹೋಗಿದ್ದಾನೆ. ಮುಖ್ಯ ರಸ್ತೆಯಿಂದ ತಿರುಗಿಸುವಾಗ ಬೈಕ್ನಲ್ಲಿ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಜಿಕೆವಿಕೆ ಲೇಔಟ್ಗೆ ನುಗ್ಗಿದ ಮಹೇಶನ ಬೈಕ್ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ತಿರುವಿನಲ್ಲಿದ್ದ ಮನೆಯ ಕಾಂಪೌಂಡ್ಗೆ ಮಹೇಶ್ ತಲೆ ಬಡಿದಿದೆ. ಗಾಯಗೊಂಡಿದ್ದ ಮಹೇಶ್ನನ್ನು ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ದಾನೆ. ಆದರೆ, ರಕ್ತದ ಮಡುವಿನಲ್ಲಿದ್ದ ಮಹೇಶ್ ಸಾವನ್ನಪ್ಪಿದ್ದಾನೆ.
ಆರೋಪಿಗಳಾದ ಅರವಿಂದ್ ಮತ್ತು ಕೇಶವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಕೊಂಡ ಬಾಲಾಜಿ ಎಂಬ ಯುವಕ ನೀಡಿದ ದೂರಿನ ಅನ್ವಯ ವಿದ್ಯಾರಾಣ್ಯಪುರ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದಾರೆ.