ಬಸ್ ಚಾಲಕನಿಗೆ ಕೆಎಸ್‍ ಆರ್ ಟಿಸಿ ಸಿಬ್ಬಂದಿಯಿಂದಲೇ ಹಲ್ಲೆ | ಪ್ರಕರಣ ದಾಖಲು

ಸವಣೂರು : ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್‌ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಇಂದು ನಡೆದಿದೆ.

ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿ ನಾರಾಯಣ ಎಂಬವರಿಗೆ ಬಸ್ ನಿಲ್ದಾಣ ಸಮೀಪ ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.



































 
 

ಬಸ್ ನಲ್ಲಿದ್ದ ಸಹಪ್ರಯಾಣಿಕರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ನಾರಾಯಣ ಅವರು ಚಾಲಕನನ್ನು ಪ್ರಶ್ನಿಸುವ ದೃಶ್ಯವಿದೆ. ಈ ವಿಡಿಯೋ ವೈರಲ್ ಆಗಿದೆ.

ಚಾಲಕ ಭರತ್‌ ಒಂದು ವರ್ಷದ ಹಿಂದೆಯಷ್ಟೇ ಗುತ್ತಿಗೆ ಆಧಾರದಲ್ಲಿ ಉದ್ಯೋಗ ಪಡೆದಿದ್ದರು. ಹಲ್ಲೆಗೊಳಗಾದ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top