ಮೈಸೂರು : ಹೋಟೆಲ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ

ಮೈಸೂರು : ದಸರಾ ಹಬ್ಬಕ್ಕೆ ಸಿದ್ಧತೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಮೈಸೂರಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಆತಂಕ ಹುಟ್ಟಿಸಿದೆ. ಮೈಸೂರಿನ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.


ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಸಂಶಯ ವ್ಯಕ್ತವಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.

ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದಿತ್ತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿತ್ತು. ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top