ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದಿಂದ ವಿದ್ಯಾನಿಧಿ-ಸಹಾಯಧನ ವಿತರಣೆ

ಪುತ್ತೂರು: ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಶನಿವಾರ ನಗರದ ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಸಂಘಗಳ ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಯಸ್.ಎಂ. ರಘು ಮಾತನಾಡಿ, ಅದರ್ಶ ವಿವಿಧೋದ್ಧೇಶ ಸಹಕಾರ ಸಂಘವು ಸರ್ಕಾರಿ ಶಾಲಾ ಮಕ್ಕಳಿಗೆ ಸಹಾಯಧನ ನೀಡುವ ಮೂಲಕ ಸಹಕಾರಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜಿಲ್ಲೆಯ ಸಹಕಾರದ ಸಂಪ್ರದಾಯಕ್ಕೆ ಇದೊಂದು ಸೀತಾರಾಮ ರೈಗಳು ತಮ್ಮದೇ ರೀತಿಯ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ, ಮಾತನಾಡಿ ಸಂಘವು ತನ್ನ ಎಲ್ಲಾ ಸದಸ್ಯರ ಸಹಕಾರದಿಂದಾಗಿ ಈ ಸಹಾಯಧನ ವಿತರಣೆ ಮಾಡಲಾಗುತ್ತಿದೆ. ಮುಂದೆ ವಿದ್ಯಾರ್ಥಿಗಳ ಹೆಚ್ಚಿನ ಕಲಿಕೆಗೆ ಅವಕಾಶವಾಗುಂತೆ ಸಹಾಯಧನ ನೀಡಬೇಕಾಗಿದೆ. ಇದಕ್ಕಾಗಿ ಎಲ್ಲಾ ಸದಸ್ಯರು ಸಹಕಾರ ನೀಡಬೇಕು ಎಂದರು.































 
 

ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಿ ಮಾತನಾಡಿದ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರತ್ನಕುಮಾರಿ ಮಾತನಾಡಿ, ಆದರ್ಶ ವಿವಿಧೋದ್ಧೇಶ ಸಹಕಾರ ಸಂಘವು ತನ್ನ ಹೆಸರಿಗೆ ತಕ್ಕಂತೆ ಆದರ್ಶವನ್ನು ಮೆರೆದಿದೆ. ಸರ್ಕಾರಿ ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುತ್ತಿರುವುದು ಸಂಘದ ಸಾಮಾಜಿಕ ಕಳಕಳಿಗೆ ನಿದರ್ಶವಾಗಿದೆ. ಇಂತಹ ಸಹಕಾರವು ವಿದ್ಯಾರ್ಥಿಗಳು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ಕಲಿಕಾ ಆಸಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ 250 ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಲಾ ರೂ. 2 ಸಾವಿರದಂತೆ ಒಟ್ಟು ರೂ. 5 ಲಕ್ಷ ಸಹಾಯಧನ ವಿತರಿಸಲಾಯಿತು.

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿಭಾಗದದಲ್ಲಿ 625 ರಲ್ಲಿ 625 ಅಂಕ ಪಡೆದು  ದ.ಕ.ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನುಶ್ರೀ ಅವರಿಗೆ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಎನ್. ಸುಂದರ ರೈ ಸವಣೂರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ. ಸೀತಾರಾಮ ರೈ ಸವಣೂರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ ವಂದಿಸಿದರು. ಸುನಾದ್ ಶೆಟ್ಟಿ ಮತ್ತು ಪ್ರಿಯಾ ಬಿ.ವಿ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top