ಬೆಂಗಳೂರು : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26ರಂದು ಇ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.
ಕೃಷ್ಣಾಷ್ಟಮಿ : ನಾಳೆ ಮಾಂಸ, ಮೀನು ಮಾರಾಟ ಬಂದ್
