ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ ಜಾರಿ

ಕುಕ್ಕೆ ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ.

ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಗೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದ್ದು,ಈಗಾಗಲೇ ಪರಿಸರದ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು  ಹತ್ತು ಜನ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎನ್ನಲ್ಲಾಗಿದೆ.































 
 

ಸುಗಮ ಸಂಚಾರ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು  ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿ ಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ಇಂದಿನಿಂದ ದಂಡ ವಿಧಿಸಲಾಗುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top