ಪ್ರೀಮಿಯಂ ಬ್ರಾಂಡ್ ಮದ್ಯದ ಬೆಲೆ ಇಳಿಕೆ | ಮದ್ಯಪ್ರಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಮದ್ಯಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಆಗಸ್ಟ್ 27ರಿಂದಲೇ ಜಾರಿಗೆ ಬರಲಿದೆ. ಪರಿಣಾಮ ಮದ್ಯಪ್ರಿಯರಿಗೆ ಗುಡ್ಯ ನ್ಯೂಸ್ ಸಿಕ್ಕಿದಂತಾಗಿದೆ.

ಭಾರತದಲ್ಲಿ ತಯಾರಿಸಿರುವ ಮದ್ಯದ (ಐಎಂಎಲ್) ಅಬಕಾರಿ ಸುಂಕದ ಸ್ಲ್ಯಾಬ್‌ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ.

ಈಗಾಗಲೇ ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್ ಗಳ ಮದ್ಯಕ್ಕೆ ಭಾರಿ ಕೊರತೆ ಉಂಟಾಗಿತ್ತು. ಇದೀಗ ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್ ಗಳ ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಆದರೆ ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್ ವರೆಗೆ ದರ ಕಡಿಮೆಯಾಗಲಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top