ಕಡಬ: ತಾಲೂಕಿನ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.7 ರಂದು ನಡೆಯುವ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಸೋಮವಾರ ಸ್ಕಂದಗಣೇಶ ನಗರದಲ್ಲಿ ನಡೆಯಿತು.
ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ, ಮಡಕೆ ಒಡೆಯುವುದು ಮುಂತಾದ ಸ್ಪರ್ಧೆಗಳು ನಡೆದವು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.
























