ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ.ಕೆ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ. ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕರಾದ ಸಂಜೀವ ಕುದ್ಪಾಜೆ, ಡಾ. ಮಮತಾ ಕೆ., ಲತೀಶ್ ಕುಮಾರ್ ಕೆ. ಹಾಗೂ ಕಛೇರಿ ಸಿಬ್ಬಂದಿ ಪವನ್ ಉಪಸ್ಥಿತರಿದ್ದರು.