ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ, ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಆ.30 ಶುಕ್ರವಾರ ಪುತ್ತೂರು ಸರಕಾರಿ ನೌಕರರ ಸಭಾಭವನದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಲಿದೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಿದ್ದು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಬಿ., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಘದ ತಾಲೂಕು ಶಾಖೆ ಮಾಜಿ ಅಧ್ಯಕ್ಷ ಕೃಷ್ಣಪ್ಪ ಕೆ., ಮೌರಿಸ್ ಮಸ್ಕರೇನಸ್ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ, ಸಂಘದ ಉಪಾಧ್ಯಕ್ಷ ಹೊನ್ನಪ್ಪ ಗೌಡ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಿರಿಧರ ಗೌಡ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.