ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ

ಪುತ್ತೂರು : ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಇಂದು ನಡೆಯಿತು.

ಮಂಡಲಗಳ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್ ಅವರಿಗೆ ಬಿಜೆಪಿ ಶಲ್ಯ ಹಾಕಿ ಕಛೇರಿಯ ದಾಖಲಾತಿ ಪುಸ್ತಕ ಹಸ್ತಾಂತರಿಸಿ ನೂತನ ಸಮಿತಿಗೆ ಶುಭ ಹಾರೈಸಿದರು.

ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಾಗೇಶ್ ಪ್ರಭು ಉಪಸ್ಥಿತರಿದ್ದರು.







































 
 

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ವಿದ್ಯಾ ಗೌರಿ, ನೂತನ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಸುನೀಲ್ ದಡ್ಡು, ಯತೀಂದ್ರ ಕೊಚ್ಚಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ ರಾಧಕೃಷ್ಣ ಬೂಡಿಯಾರ್, ಅರುಣ್ ಪುತ್ತಿಲ, ಒ.ಬಿ.ಸಿ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್, ಚನಿಲ ತಿಮ್ಮಪ್ಪ ಶೆಟ್ಟಿ,ಜೀವಂಧ‌ರ್ ಜೈನ್, ಅಪ್ಪಯ ಮಣಿಯಾಣಿ, ಸಂತೋಷ್ ರೈ ಕೈಕಾರ, ರಾಜೇಶ್ ಬನ್ನೂರು, ಹರೀಶ್ ಮರುವಾಳ, ಪ್ರಜ್ವಲ್ ಘಾಟೆ, ರವಿಕುಮಾರ್ ರೈ ಮಠ, ಸುಜಿತ್ ಬೆಟ್ಟಂಪಾಡಿ, ಮಣಿಕಂಠ, ವಿಶ್ವನಾಥ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top