ಹಣ ಸಂಪಾದಿಸಲು ಅಡ್ಡದಾರಿ ಹಿಡಿದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ
ಅಮರಾವತಿ: ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್ನ ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷ್ಣಾ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದೆ. ಗುರುವಾರ ಸಂಜೆ ವಾಶ್ರೂಮ್ನಲ್ಲಿ ಮುಚ್ಚಿಟ್ಟಿದ್ದ ವಸ್ತುವೊಂದನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳು ಸಿಕ್ಕಿವೆ.
ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್ನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶ್ರೂಮ್ನಲ್ಲಿರುವ ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಫೋಟೋಗಳು ಮತ್ತು ವೀಡಿಯೊಗಳು ಸೋರಿಕೆಯಾಗಿದ್ದು ಹಣ ಕೊಟ್ಟು ಕೆಲವು ವಿದ್ಯಾರ್ಥಿಗಳು ಆರೋಪಿ ವಿಜಯ್ನಿಂದ ವೀಡಿಯೊಗಳನ್ನು ಖರೀದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.