ಪುತ್ತೂರು: ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಹಾಗೂ ಕಾಯಿಮಣ ಗ್ರಾಮದ ಸದಸ್ಯ ಮನೆಯ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಹಾಗೂ ಪದವಿಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆರ್ಜಿ ಆಹ್ವಾನಿಸಲಾಗಿದೆ.
ಸೆ.15 ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಆದ್ದರಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕ ಪಟ್ಟಿ ಪ್ರತಿಗಳನ್ನು ಸೆ.6 ರೊಳಗೆ ಸಂಘದ ಪ್ರಧಾನ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಯನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಘದ ದೂರವಾಣಿ ಸಂಖ್ಯೆ 9449482231, 9449035625 ಹಾಗೂ 9901893584 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.