ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ರೈ. ಮಾತನಾಡಿ ಹಾಕಿಕ್ರೀಡೆ ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆ. 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತೀಯ ಹಾಕಿಕ್ರೀಡೆ ಮಾಂತ್ರಿಕ ಧ್ಯಾನ್ ಚಂದ್ರ ಅವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು. ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆ ವಹಿಸುವ ಮಹತ್ತರ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಉತ್ಸಾಹ ಮೂಡಿಸುತ್ತದೆ. ಆಟ , ಪಾಠಗಳ ಜೊತೆಗೆ ಧ್ಯಾನ ಮಾಡುವುದರಿಂದ ಏಕಾಗ್ರತೆ, ಸಹನೆ ಮತ್ತು ಸದಾ ಚಟುವಟಿಕೆಯಿಂದಿರಲು ಸಾಧ್ಯವಾಗುತ್ತದೆ ಎಂದು ತಮ್ಮಅನುಭವವನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಅಧ್ಯಕ್ಷತೆ ವಹಿಸಿ, ನಾವು ನಮ್ಮ ದೇಶದ ಅಪ್ರತಿಮ ಕ್ರೀಡಾ ಪಟುವಿನ ಜನ್ಮದಿನವನ್ನು ದೇಶದ ಕ್ರೀಡಾ ದಿನವನ್ನಾಗಿ ಆಚರಿಸುವುದು ಪ್ರತಿಯೊಬ್ಬ ಕ್ರೀಡಾಪಟುವಿಗೆ ಅಭಿಮಾನದ ವಿಷಯ. ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಅರ್ಹತೆಯನ್ನು ದ್ವಿಗುಣಗೊಳಿಸಲು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಸಾಧನೆಯು ಅತೀಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಎ., ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಜೀವನ್, ಕ್ರೀಡಾ ಕಾರ್ಯದರ್ಶಿ ಕುಮಾರಿ ವಿಸ್ಮಿತ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮೋಕ್ಷ ಪ್ರಾರ್ಥನೆ ಹಾಡಿದರು. ಬಿಎಚ್. ಉಪನ್ಯಾಸಕಿ ಶ್ರುತ ವಂದಿಸಿದರು. ಉಪನ್ಯಾಸಕಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.