ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ ಆರೋಪಿಯೊಬ್ಬನಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಪುತ್ತೂರು ಕಬಕದ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದವನು.

ಈತನ ಜೊತೆಗೆ ಈತನ ತಂದೆ ರಾಮಣ್ಣ ಪೂಜಾರಿ (63) ಮತ್ತು ಬಾವ ನಿಖಿತಾಶ್ ಸುವರ್ಣ(40) ನಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.



































 
 

ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಸುತ್ತಾಡಿಸಿದ್ದ. ಬಳಿಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯ ಮನೆಗೂ ಹೋಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಯುವತಿ ಮದುವೆಯಾಗಲು ಕೇಳಿಕೊಂಡಾಗ ನಿರಾಕರಿಸಿದ್ದ. ಪರಸ್ಪರ ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ಹೇಳಿದ್ದ.

ನಿತೇಶ್‌ನ ತಂದೆ ಮತ್ತು ಬಾವನ ಬಳಿ ಯುವತಿ ಕೇಳಿಕೊಂಡಾಗ ಅವರು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್ಸ್‌ಪೆಕ್ಟ‌ರ್ ತಿಮ್ಮಪ್ಪ ನಾಯಕ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top