ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಸೆರೆ

ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸುವಾಗ ಸಿಕ್ಕಿಬಿದ್ದ ಉಗ್ರ

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬುಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು.































 
 

ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top