ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 39 ರೂ. ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.
ಭಾನುವಾರ ದಿಲ್ಲಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 39 ರೂ. ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್ಗೆ 30 ರೂ., ಜೂನ್ನಲ್ಲಿ 69.50 ಮತ್ತು ಮೇ ತಿಂಗಳಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್ಪಿಜಿ ಬೆಲೆಗಳಲ್ಲಿನ ಹೆಚ್ಚಳ ರೆಸ್ಟೋರೆಂಟ್ಗಳು ಮತ್ತು ಹೋಟೆಲ್ಗಳಿಂದ ಹಿಡಿದು ಸಣ್ಣ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.