ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ  ಆಂಬ್ಯುಲೆನ್ಸ್‌ ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದಿದೆ.

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಅಪಘಾತ ಸಂಭವಿಸಿದ್ದು. ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹಾಗೂ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.  ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಅಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಂಟೈನರ್ ಚಾಲಕ ಜೆಸಿಬಿಯೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಆಂಬುಲೆನ್ಸ್ ನ ಮುಂಭಾಗ ನಜ್ಜುಗುಜ್ಜಾಗಿದ್ದು ಕಂಟೈನರ್‌ಗೂ ಹಾನಿ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಸಂಖ್ಯೆ ಪೊಲೀಸ್ ಠಾಣಾ ಎಸ್.ಐ. ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top