ವಿಟ್ಲ: ಪಟ್ಟಣ ಪಂಚಾಯತ್ನ ನೂತನ ಅಧ್ಯಕ್ಷರಾಗಿ ಕರುಣಾಕರ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಾಣೆಮಜಲು ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಇಂದು ವಿಟ್ಲ ಪಟ್ಟಣ ಪಂಚಾಯತ್ನಲ್ಲಿ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಕರುಣಾಕರವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದೆ. ಚುನಾವಣೆ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸೇರಿದಂತೆ ಹಲವು ನಾಯಕರು, ಮುಖಂಡರು ವಿಟ್ಲಕ್ಕೆ ಭೇಟಿ ನೀಡಿದರು.