ಮುಡಾ ಹಗರಣ : ಅಮಾನತು ಆದೇಶವೇ ಸಿಎಂಗೆ ಮುಳ್ಳಾಗುತ್ತಾ?

ಸೈಟ್‌ಗೆ ಸಂಬಂಧಪಟ್ಟ ಆದೇಶದಲ್ಲೇ ಸತ್ಯ ಬಹಿರಂಗ

ಬೆಂಗಳೂರು: ತನ್ನನ್ನು ಸುತ್ತಿಕೊಂಡಿರುವ ಮುಡಾ ಭೂ ಹಗರಣದಿಂದ ಪಾರಾಗುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದು ತಂತ್ರಗಾರಿಕೆ ಮಾಡುತ್ತಿದ್ದಾರೆ. ಅದರಂತೆ ನಿನ್ನೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಆದರೆ ಈ ಅಮಾನತು ಆದೇಶದಲ್ಲೇ ಸರ್ಕಾರ ಹಲವು ಸತ್ಯಗಳನ್ನು ಬಿಚ್ಚಿಟ್ಟಿದೆ. ಸರ್ಕಾರದ ಅಮಾನತು ಆದೇಶದ ಅಂಶಗಳೇ ಸಿದ್ದರಾಮಯ್ಯನವರಿಗೆ ತಿರುಗುಬಾಣವಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

2001ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ.







































 
 

50:50 ಅನುಪಾತ 2009ರಲ್ಲಿ ಜಾರಿಗೆ ಬಂದಿದೆ. 2009ಕ್ಕಿಂತ ಹಿಂದಿನ ಹಳೆ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲ. ಆದರೆ ಪ್ರಾಧಿಕಾರ 2009 ಹಿಂದಿನ ಬಡಾವಣೆಗಳ ಬದಲಿ ನಿವೇಶನಗಳ ಮಂಜೂರಾತಿಗಾಗಿ 50:50 ಅನುಪಾತ ಕೈಗೊಂಡಿರುವುದು ಕಾನೂನುಬಾಹಿರ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಿಎಂ ಪತ್ನಿಯ ಸಹೋದರನ ಜಾಗವನ್ನು ಮುಡಾ ವಶಪಡಿಸಿಕೊಂಡದ್ದು 2001ರಲ್ಲಿ. ಅಲ್ಲಿಗೆ 50:50 ಅನುಪಾತ ಇದಕ್ಕೆ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟವಾಗುತ್ತದೆ. ಹೀಗಾಗಿ ಸಿದ್ದರಾಮಯ್ಯನವರ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಈ ಆದೇಶದ ಮೂಲಕ ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಂತಾಗಿದೆ. ಈ ಸರ್ಕಾರಿ ಆದೇಶವೇ ಸಿಎಂಗೆ ಮುಳ್ಳಾಗುವ ಸಾಧ್ಯತೆಯಿದೆ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top