ಕಡಬ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ | ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಧೀಶರು

ಕಡಬ: ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.

ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ ಪಡೆದುಕೊಂಡು ಕೊಯಮುತ್ತೂರಿನಿಂದ ಆಸಿಡ್ ಖರೀದಿಸಿ ಸಮವಸ್ತ್ರ ಧರಿಸಿಕೊಂಡು ಮಾ. 4ರಂದು ಬೆಳಿಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಸಿಡ್‌ ದಾಳಿ ನಡೆಸಿದ್ದ. ಈ ವೇಳೆ ಮೂವರು ವಿದ್ಯಾರ್ಥಿನಿಯರಿಗೆ ಗಾಯವಾಗಿತ್ತು..

ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಆಲಿಸಿ ಪ್ರಸ್ತುತ ವಿದ್ಯಾರ್ಥಿನಿಯರ ಪರಿಸ್ಥಿತಿಯನ್ನು ಅಭಿಯೋಜನೆಯು ವಾದ ಕಾಲಕ್ಕೆ ಹಾಜರು ಪಡಿಸಿದ ವೈದ್ಯಕೀಯ ಧೃಡ ಪತ್ರದ ಮೂಲಕ ತಿಳಿದುಕೊಂಡು ಈಗಲೂ ವಿದ್ಯಾರ್ಥಿ ನಿಯರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದ್ದರಿಂದ ಆರೋಪಿಗೆ ಜಾಮೀನು ನೀಡಿದ್ದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯಪಟ್ಟು ದೋಷಾರೋಪಣಾ ಪತ್ರದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಹಾಗೂ ಪ್ರಕರಣದ ತೀವ್ರತೆಯನ್ನು ಗಮನಿಸಿ ಆರೋಪಿಯ ನ್ಯಾಯಾಧೀಶರಾದ ಸರಿತಾ ಡಿ. ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.































 
 

ಅಭಿಯೋಜನೆಯ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ. ಕೆ. ಭಟ್ ವಾದಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top