ಗಣೇಶೋತ್ಸವ ಮೆರವಣಿಗೆ ವೇಳೆ ದೈವಾರಾಧನೆ ಸ್ತಬ್ಧಚಿತ್ರ ನಿಷೇಧಕ್ಕೆ ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಆಗ್ರಹ : ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯಕ್ಕೆ ಮನವಿ

ಮಂಗಳೂರು: ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ, ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮೂಲಕ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯಕ್ಕೆ ಮನವಿ ಮಾಡಲಾಯಿತು.

ಹಿಂದೂ ಧರ್ಮದ ಅವಿಭಾಜ್ಯ ನಂಬಿಕೆಯಾಗಿರುವ ದೈವಗಳನ್ನು ಟ್ಯಾಬ್ಲೋಗಳಲ್ಲಿ ಪ್ರದರ್ಶಿಸುವುದನ್ನು ಸಂಘಟನೆ  ಸಹಿಸುವುದಿಲ್ಲ. ಈ ಕುರಿತು ಜಿಲ್ಲೆಯಿಂದ ಸಂಘಟನೆಯ ಪ್ರಮುಖರಿಗೆ, ಕಾರ್ಯಕರ್ತರಿಗೆ, ಕಾರ್ಯಕ್ರಮದ ಆಯೋಜಕರಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡುವುದಾಗಿ ಸಂಘಟನೆಯ ಪ್ರಮುಖರು ಭರವಸೆ ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ, ವಿಎಚ್‌ಪಿ ಪ್ರಾಂತ ಸೇವಾ ಸಹ ಪ್ರಮುಖ್ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಉಪಾಧ್ಯಕ್ಷ ಸಂಜೀವ ಸೂಟರ್‌ಪೇಟೆ, ಭಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ, ದೈವಾರಾಧನೆ ಸಂರಕ್ಷಣಾ ವೇದಿಕೆಯ ಅಧ್ಯಕ್ಷ  ಭರತ್ ಬಳ್ಳಾಲ್ ಬಾಗ್, ಕಾರ್ಯದರ್ಶಿ ಗಿರೀಶ್ ಸುವರ್ಣ ಮೂಲ್ಕಿ, ಸದಸ್ಯರಾದ ಮಹೇಶ್ ಅಮೀನ್, ಸಂತು ಅನಂತಾಡಿ ಉಪಸ್ಥಿತರಿದ್ದರು.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top