ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾ ರಾಜ್ಯದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಬಂದೂಕುಧಾರಿ ಬಾಲಕ ಬಂಧನದಲ್ಲಿದ್ದಾನೆ. ಜಾರ್ಜಿಯಾದ ವಿಂಡರ್ನಲ್ಲಿರುವ ಅಪಾಲಾಚಿ ಹೈಸ್ಕೂಲ್ನ ಕೋಲ್ಟ್ ಕ್ರೇ (14) ಎಂಬ ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿದಾತ ಎಂದು ಗುರುತಿಸಲಾಗಿದೆ.
ಪೊಲೀಸರು ಗುಂಡಿನ ದಾಳಿ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ವರ್ಷ ಅಮೆರಿಕದಲ್ಲಿ ಕನಿಷ್ಠ 385 ಗುಂಡಿನ ದಾಳಿ ಪ್ರಕರಣಗಳು ಸಂಭವಿಸಿವೆ.