ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಶನಿವಾರ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠೆ ಮೂಲಕ ಚಾಲನೆ ನೀಡಲಾಯಿತು.

ಶನಿವಾರ ಬೆಳಿಗ್ಗೆ 8 ಕ್ಕೆ ಭಜನೆ ನಡೆಯಿತು. 8.30 ಕ್ಕೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಧ್ವಜಾರೋಹಣವನ್ನು ಉದ್ಯಮಿ ವಾಮನ್ ಪೈ ನೆರವೇರಿಸಿದರು.

ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ, ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top