ಮುಡಾದ ಇನ್ನೊಂದು ಬೃಹತ್‌ ಹಗರಣ ಬಯಲು

ಒಂದೇ ದಿನ 848 ಸೈಟ್‌ಗಳ ಖಾತಾ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಹೆಂಡತಿ ಹೆಸರಿನಲ್ಲಿ ಅಕ್ರಮವಾಗಿ ಸೈಟ್‌ ಪಡೆದುಕೊಂಡಿದ್ದಾರೆ ಎನ್ನಲಾಗಿರುವ ವಿವಾದ ಹೊಗೆಯಾಡುತ್ತಿರುವಂತೆಯೇ ಇದಕ್ಕೂ ದೊಡ್ಡದಾದ ಇನ್ನೊಂದು ಹಗರಣ ಬಯಲಾಗಿದೆ.
ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮುಡಾ ಮಾಜಿ ಅಧ್ಯಕ್ಷ ಎಚ್​.ವಿ.ರಾಜೀವ್ ನಡೆಸಿದ ಅಕ್ರಮ ಇದು ಎನ್ನಲಾಗಿದೆ. ಅನುಮತಿ ಇಲ್ಲದೇ ಎಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತಾ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೈಸೂರು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಚ್.ವಿ ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ. 252 ಎಕರೆ ಜಾಗದ ಕೆಲವು ಸರ್ವೆ ನಂಬರ್​ಗಳ ವ್ಯಾಜ್ಯ ನ್ಯಾಯಾಲಯದಲ್ಲಿದೆ. ಹೀಗಾಗಿ ಈ ಬಡವಾಣೆಗಳ ನಿವೇಶನ ಹಕ್ಕುಗಳನ್ನು ಮುಡಾ ವರ್ಗಾವಣೆ ಮಾಡಬಾರದೆಂದು‌ ಆದೇಶವಿದೆ. ಹೀಗಿದ್ದರೂ ಎಚ್.ವಿ ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ‌ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿದ್ದಾರೆ.
ಆಯುಕ್ತರ ಅನುಮೊದನೆ ಇಲ್ಲದಿದ್ದರೂ ತಾಂತ್ರಿಕ ಶಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ್​​ ಪತ್ರ ಬರೆದಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top