ಗುವಾಹಟಿ: 2014ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರಲು ಅಸ್ಸಾಂ ಸರ್ಕಾರ ನಿರ್ಧಾರಿಸಿದೆ.
ಧುಬ್ರಿ, ಬಾರ್ಪೇಟಾ, ಮೊರಿಗಾಂವ್ ಜಿಲ್ಲೆಗಳಲ್ಲಿ ಒಟ್ಟು ಆಧಾರ್ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಗಿಂತ ಹೆಚ್ಚಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರಾಗಿದ್ದು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು ಮೊರಿಗಾಂವ್‌ಗೆ ಶೇ.103, ಶೇ.103 ಮತ್ತು ಶೇ.101 ಆಗಿದೆ. ಆದ್ದರಿಂದ
ಭವಿಷ್ಯದಲ್ಲಿ ಆಧಾರ್ ಕಾರ್ಡ್‌ಗಳ ವಿತರಣೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೋಟೊಕಾಲ್ ಅನುಸರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2014ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.
3.3 ಕೋಟಿ ಜನರ ಪಟ್ಟಿಯಲ್ಲಿಲ್ಲದ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದವರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುವುದಿಲ್ಲ ಎಂದು ಶರ್ಮಾ ಸ್ಪಷ್ಟಪಡಿಸಿದ್ದಾರೆ.