ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ | 4 ಲಕ್ಷ ರೂ. ವೆಚ್ಚದ ತಂಗುದಾಣ

ಪುತ್ತೂರು ಬಲ್ನಾಡು: ಬುಳರಿಕಟ್ಟೆ ಸಾಜ ಕ್ರಾಸ್ ಬಳಿ 4 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣದ ಉದ್ಘಾಟನಾ ಸಮಾರಂಭ ಭಾನುವಾರ ಸಂಜೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಂಗುದಾಣವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಶಾಸಕರ 2023 24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದ ಮೂಲಕ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಬುಳೇರಿಕಟ್ಟೆ ಸಾಜ ಕ್ರಾಸ್ ಬಳಿ ಈ ನೂತನ ತಂಗುದಾಣ ನಿರ್ಮಾಣವಾಗಿದೆ.





















































 
 

ಉದ್ಘಾಟನಾ ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪರಮೇಶ್ವರಿ ಭಟ್ ಬಬ್ಬಲಿ, ಉಪಾಧ್ಯಕ್ಷರಾದ ರವಿಚಂದ್ರ ಸಾಜ, ಚಂದಪ್ಪ ಪೂಜಾರಿ, ಕಾಂಗ್ರೆಸ್ ಮುಖಂಡರಾದ ರಾಜಾರಾಮ ಕೆ.ಬಿ., ಎಂ.ಎಸ್‍.ಮಹಮ್ಮದ್, ಎಚ್‍.ಮಹಮ್ಮದಾಲಿ, ಸಹಿತ ಹಲವು ಮಂದಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top