ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪದಡಿ ದೂರು ನೀಡಿದ್ದು, ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ಹೊಟೇಲೊಂದರಲ್ಲಿ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರುಣ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಇದು ಸುಳ್ಳು ಆರೋಪವಾಗಿದ್ದು ಈ ಬಗ್ಗೆ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು. ವಾದ ಪುರಸ್ಕರಿಸಿದ ನ್ಯಾಯಮೂರ್ತಿಗಳು ಎಫ್.ಐ.ಆರ್. ಮತ್ತು ಮುಂದಿನ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ.