ಅ.3-12 : ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು; ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.3 ರಿಂದ 12 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು, ನವರಾತ್ರಿ ಸೇವಾಕರ್ತರು, ಶಾಶ್ವತ ಸೇವಾಕರ್ತರು ಸೇರಿದಂತೆ ನೂರಾರು ಭಗವದ್ಭಕ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top