ಪುತ್ತೂರು: ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ ನಿಧಿ ಎಂದರೆ ಅದು ಮಣ್ಣು. ತಂತ್ರಜ್ಞಾನ ಮುಂದುವರೆದರೂ ಮಣ್ಣನ್ನು ಯಾರು ಉತ್ಪದಿಸಲಾರರು. ಮಣ್ಣಿಗೆ ಅದರದೇ ಆದ ಮಹತ್ವವಿದೆ. ನಮ್ಮ ಸ್ವಾರ್ಥಕ್ಕಾಗಿ ಪಶ್ಚಿಮ ಘಟ್ಟವನ್ನು ಹಾಳುಮಾಡುತ್ತಿದ್ದೇವೆ. ಅಭಿವೃದ್ಧಿ ಹೆಸರಿನಲ್ಲಿ ಭೂಮಿಯನ್ನು ಕೆಡಿಸುತ್ತಿದ್ದೇವೆ. ಪ್ರಕೃತಿಯ ಮುಂದೆ ಯಾರು ದೊಡ್ಡವರಲ್ಲ, ಮಣ್ಣುಇಲ್ಲದೆ ಜೀವ ಇಲ್ಲಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಭೂ ವಿಜ್ಞಾನಿ ಡಾ. ಎಚ್.ಎನ್. ಉದಯಶಂಕರ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ ) ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿರುವ ವಿದ್ಯಾಸಂಸ್ಥೆಗಳಿಂದ ಆಚರಿಸಲಾದ 43ನೇ ನೇ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಕೃತಿ ಸಂರಕ್ಷಣೆ ನಮ್ಮೆಲರ ಹೊಣೆ ಉಪನ್ಯಾಸ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರೂ ಪ್ರಕೃತಿಯ ಸೃಷ್ಟಿ ಎಂಬುದನ್ನು ಮರೆತು ಭೂಮಾತೆಯ ಮೇಲೆ ನಮ್ಮ ದರ್ಪವನ್ನುತೋರುತ್ತಿದ್ದೇವೆ. ಭೂಮಿಯ ಶ್ವಾಸಕೋಶದಂತಿರುವ ಅರಣ್ಯವನ್ನು ನಾಶಮಾಡುತ್ತಿದ್ದೇವೆ. ಭೂಮಿಯನ್ನು ಉಳಿಸುವುದು, ಅಳಿಸುವುದು ಎರಡು ನಮ್ಮ ಕೈಯಲ್ಲಿದೆ ಹಾಗೆಯೇ ನಮ್ಮ ವಿನಾಶದ ಮಾರ್ಗವನ್ನು ನಾವೇ ಕಂಡುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಗಣೇಶೋತ್ಸವ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನುಗಣೇಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥಡಾ. ಅರುಣ್ ಪ್ರಕಾಶ್ ವಂದಿಸಿದರು. ಉಪನ್ಯಾಸಕಿ ಡಾ. ಶೃತಿ ಎಂ. ಎಸ್ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ,ವಿಕಸನವನ್ನು ಬಿಡುಗಡೆಗೊಳಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದ ನಂತರ ಗಣೇಶೋತ್ಸವದ ಭವ್ಯ ಶೋಭಾಯಾತ್ರೆ ನಡೆಯಿತು.