ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಭರತನಾಟ್ಯ ತರಗತಿ ಸೆ.9ರಂದು ಪ್ರಾರಂಭಗೊಂಡಿತು.

ಐಕ್ಯಮ್ ಕಲಾ ಅಕಾಡೆಮಿ ಶಿಕ್ಷಕಿ ವಿದುಷಿ ನಿಖಿತಾ ಪಾಣಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಭರತನಾಟ್ಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.
ಅಧ್ಯಕ್ಷ ತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಭರತನಾಟ್ಯದ ಮಹತ್ವದ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕಿ ಪ್ರತಿಭಾ ದೇವಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸವಿತಾ ಕೆ. ಸ್ವಾಗತಿಸಿದರು. ಶಿಕ್ಷಕಿ ಯಶುಭ ರೈ ರವರು ವಂದಿಸಿದರು. ಶಾಲಾ ಶಿಕ್ಷಕ ವೃಂದ, ಪೋಷಕ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.