ಸ್ಕೂಟರ್ ಅಪಘಾತ | ಆಸ್ಪತ್ರೆಗೆ ದಾಖಲಾಗಿದ್ದ ಕೀರ್ತನ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೆಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು.

ಸೆ.10 ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top