ಕಡಬ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತರಾದ ಕಡಬ ತಾಲೂಕಿನ ಸುಂದರ ಗೌಡ ಅಂಗಣ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಆರ್ಮಿಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಅವರು ನಿವೃತ್ತರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಸರಕಾರಿ ಗೌರವದೊಂದಿಗೆ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು (ಶನಿವಾರ) ನಡೆಯಿತು.