ಉಡುಪಿ: ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರು” ಗಳ 170ನೇ ವರ್ಷದ ಜಯಂತಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಅದ್ದೂರಿಯಿಂದ ಜರಗಿತು.

ಸಮಾರಂಭದಲ್ಲಿ ರಾಜಕೀಯ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬಿಜೆಪಿ ಒಬಿಸಿ ಮೋರ್ಚದ ರಾಜ್ಯ ಉಪಾಧ್ಯಕ್ಷ ವಿಠಲ ಪೂಜಾರಿ, ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ರೆಂಜ, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಶೆಟ್ಟಿ ಉಡುಪಿ ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷ ವಿಜಯಕುಮಾರ್, ಬೈಂದೂರು ಒಬಿಸಿ ಮೋರ್ಚಾದ ಅಧ್ಯಕ್ಷರು ಸೇರಿದಂತೆ ಪಕ್ಷದ ಅನೇಕ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.