ನೇಣು ಬಿಗಿದು ಆತ್ಮಹತ್ಯೆ !

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ.

ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡವರು.

ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅಣ್ಣಿ ಗೌಡ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರಾದ ಗಣೇಶ, ಸುರೇಶ ಅವರು ನೇಣು ಹಗ್ಗವನ್ನು ತುಂಡು ಮಾಡಿ ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಅಣ್ಣಿ ಗೌಡ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.





























 
 

ಪುತ್ರ ಗಣೇಶ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top