ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಶಾಸಕರ ಕಚೇರಿ ಸಭಾಂಗಣದಲ್ಲಿ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.

ಸರಕಾರದಿಂದ ಕೆಲವೊಂದು ಸೌಲಭ್ಯಗಳನ್ನು ವೆಬ್ ಸೈಟ್ ಮೂಲಕ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆದುಕೊಳ್ಳುವಂತೆ ಸಾರ್ವಜನಿಕವಾಗಿ ತಿಳಿಸುತ್ತದೆ. ಆದರೆ ಈ ಆನ್ ಲೈನ್ ಅರ್ಜಿ ಹಾಕುವ ಬಗ್ಗೆ ಕೆಲವರಿಗೆ ಮಾಹಿತಿ ಕೊರತೆ ಇರುತ್ತದೆ. ಈ ಕಾರಣಕ್ಕೆ ಕೆಲವರು ಅವಕಾಶ ವಂಚಿತರಾಗುತ್ತಿದ್ದಾರೆ. ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಪ್ರತೀಯೊಂದು ಇಲಾಖೆಗಳು ಜನ ಸಾಮಾನ್ಯರಿಗೂ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕು ಮತ್ತು ಅರ್ಜಿ ಹಾಕುವ ವಿಚಾರವನ್ನು ಸೋಶಿಯಲ್ ಮೀಡಿಯಾ ಮತ್ತು ಮಾಧ್ಯಮಗಳಿಗೂ ಮಾಹಿತಿ ನೀಡುವ ಕೆಲಸವನ್ನು ಮಾಡಬೆಕು ಎಂದು ಹೇಳಿದರು.



































 
 

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾದ 36  ಮಂದಿ ಪಲಾನುಭವಿಗಳಿಗೆ ಶಾಸಕರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ ಮಾಡಿದರು.

ವೇದಿಕೆಯಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಇಲಾಖೆ ದಿ. ದೇವರಾಜು ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top