ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ.
ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್ ಎಸ್ ಆರ್ ಪಿ. ನಂಬರ್ ಪ್ಲೇಟ್ ಕಡ್ಡಾಯ ಮಾಡಲಾಗಿದ್ದು, ಸೆ.15 ಕೊನೆಯ ದಿನ ಗಡುವು ನೀಡಿತ್ತು. ಅದಾದ ಬಳಿಕದ ಬೆಳವಣಿಗೆಯಲ್ಲಿ ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆಗೆ ಸೆ.18 ರಂದು ನಿಗದಿಯಾಗಿತ್ತು. ಇದೀಗ ಹೈಕೋರ್ಟ್ ವಿಚಾರಣೆ ಮುಗಿದಿದ್ದು, ಎಚ್ ಎಸ್ ಆರ್ ಪಿ. ನಂಬರ್ ಪ್ಲೇಟ್ ಅಳವಡಿಸದೇ ಇದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಏಪ್ರಿಲ್ 1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದ್ದು, ಈ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಈ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.