ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.
ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮರ್, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ, ಗ್ರಾಮಾಂತರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ, ನಗರ ಮಂಡಲದ ಯುವ ಮೋರ್ಚಾ ಅಧ್ಯಕ್ಷ ನಿತೀಶ್ ಕಲ್ಲೆಗ ಹಾಗೂ ಮಾಜಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಕ್ತದಾನ ಶಿಬಿರದ ಸಂಚಾಲಕ ಪುರುಷೋತ್ತಮ ಮುಂಗ್ಲಿಮನೆ, ಗ್ರಾಮಾಂತರ ಮಂಡಲ ಹಾಗೂ ನಗರಮಂಡಲದ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.