ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು: ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.

ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು.

ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.





























 
 

ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಮಾತನಾಡಿ, ಸಮಯ ನಿರ್ವಹಣೆಯ ಕಲೆ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾದದ್ದು. ಸಿಕ್ಕಿದ ಸಮಯವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಕೆಲಸಗಳನ್ನು ಪೂರೈಸಿಕೊಳ್ಳಬೇಕು ಎಂದರು

ಆಡಳಿತ ಮಂಡಳಿ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಶಿಸ್ತಿನಿಂದ ಕೂಡಿದ ಸುಸಂಸ್ಕೃತ ಜೀವನವು ನಮ್ಮನ್ನು ಸಮಾಜದಲ್ಲಿ ಎತ್ತರದ ಸ್ಥಾನದಲ್ಲಿ ನಿಲ್ಲುವಂತೆ ಮಾಡುತ್ತದೆ ಎಂದರು.

ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಹಾಗೂ ಕಾಲೇಜಿನ ನಿಯಮ ಮತ್ತು ನಿಬಂಧನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕಿ ವಿದ್ಯಾ.ಆರ್.ಗೌರಿ, ಪ್ರವೇಶ, ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿ ಪ್ರೊ.ಲತಾ ಮೋಹನ್ ಶೆಟ್ಟಿ ವಂದಿಸಿದರು. ಪ್ರೊ.ಶ್ರೀಶರಣ್ಯ.ಯು.ಆರ್ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ.ತೇಜಸ್ವಿನಿ.ಎಲ್.ಪಿ, ಪ್ರೊ.ರವಿಶಂಕರ್, ಪ್ರೊ.ಮಾಧವಿ.ಪೈ, ಪ್ರೊ. ರೇಶ್ಮಾ, ಪ್ರೊ.ರವೀಶ್.ಪಿ, ಪ್ರೊ..ಸೌಜನ್ಯ.ಎಂ.ಎಂ ವಿವಿಧ ಜವಾಬ್ಧಾರಿಗಳನ್ನು ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top