ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮತ್ತಿತರ ಪ್ರಾಣಿಜನ್ಯ ಅಂಶಗಳಿರುವುದು ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಆದೇಶ ಹೊರಡಿಸಿದೆ.
ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.