ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ ಖಂಡಿಸಿ ಛತ್ತೀಸ್ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.
ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಛತ್ತೀಸ್ಗಢದ ಬಿಜೆಪಿ ವಕ್ತಾರ ಅಮರ್ಜೀತ್ ಸಿಂಗ್ ಛಾಬ್ರಾ, ರಾಹುಲ್ ಹೇಳಿಕೆಯಿಂದ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ರಾಯ್ಪುರದಲ್ಲಿ ದೂರು ದಾಖಲಿಸಿದ್ದಾರೆ.